Vishwakarma (ವಿಶ್ವಕರ್ಮ)
เกี่ยวกับ Vishwakarma (ವಿಶ್ವಕರ್ಮ)
Vishwakarma the architect of this world (Architect).
ವಿಶ್ವಕರ್ಮ ಎಂದರೆ ಈ ವಿಶ್ವದ ವಿನ್ಯಾಸಕಾರ (Architect). ಪ್ರಾಚೀನ ಗ್ರಂಥಗಳಲ್ಲಿ ಈ ವಿಶ್ವವನ್ನು ಐವತ್ತೈದು ಅವಯವಗಳಿರುವ ಪ್ರವೃತ್ತಿ ಮತ್ತು ನಿವೃತ್ತಿ ಎಂಬ ಎರಡು ಹಣ್ಣುಗಳಿರುವ ಒಂದು ಮರವನ್ನಾಗಿ ವರ್ಣಿಸಿದ್ದಾರೆ. ಇಲ್ಲಿ ಪ್ರವೃತ್ತಿ ಎಂದರೆ ಬೌದ್ಧಿಕ ಸುಖದ ಬೆನ್ನು ಹತ್ತುವ ಕರ್ಮ ಜೀವಿ, ಹಾಗೂ ನಿವೃತ್ತಿ ಎಂದರೆ ಬೌದ್ಧಿಕ ಸುಖಕ್ಕೆ ಬೆನ್ನು ಹಾಕಿ ಮೋಕ್ಷದತ್ತ ಪ್ರಯಾಣಿಸುತ್ತಿರುವವ ಎಂದರ್ಥ. ಭಗವಂತನ ಈ ಅಪೂರ್ವ ವಿನ್ಯಾಸದ ಹಿಂದಿರುವ ಐವತ್ತೈದು ಪ್ರಮುಖ ಅಂಗಗಳನ್ನು ಮರದ ಉದಾಹರಣೆಯೊಂದಿಗೆ ವರ್ಣಿಸಿದ್ದಾರೆ.
ಬನ್ನಿ, ಈ ಅಪೂರ್ವ ವಿನ್ಯಾಸವನ್ನು ಸಂಕ್ಷಿಪ್ತವಾಗಿ ನೋಡೋಣ.
1) ಏಕಾಯನಹಃ - ಈ ವಿಶ್ವಕ್ಕೆ ಮೂಲ-ಪ್ರಕೃತಿ. ಇದನ್ನೇ ಇಲ್ಲಿ ಮರವೆಂದು ಕರೆದಿರುವುದು.
2-3 ) ವಿಫಲಹಃ -ಮೇಲೆ ಹೇಳಿರುವ ಪ್ರವೃತ್ತಿ ಮತ್ತು ನಿವೃತ್ತಿ ಈ ಮರದಲ್ಲಿರುವ ಎರಡು ಹಣ್ಣುಗಳು.
4 -6 ) ತ್ರಿಮೂಲಹಃ -ಸತ್ವ , ರಜಸ್ಸು ಮತ್ತು ತಮಸ್ಸು ಎಂಬ ಮೂರು ಮೂಲಗಳು.
7-10 ) ಚತುರಸಹಃ -ಧರ್ಮ , ಅರ್ಥ , ಕಾಮ , ಮತ್ತು ಮೋಕ್ಷವೆಂಬ ನಾಲ್ಕು ರಸಗಳು.
11-15 ) ಪಂಚಶಿಖಃ -ಮಣ್ಣು , ನೀರು , ಬೆಂಕಿ , ಗಾಳಿ ಮತ್ತು ಆಕಾಶವೆಂಬ ಪಂಚಭೂತಗಳು. (ಅಥವಾ-ಶಬ್ದ , ಸ್ಪರ್ಶ ,ರೂಪ , ರಸ ಮತ್ತು ಗಂಧ)
16-21 ) ಷಡಾತ್ಮ - ಆರು ಸ್ವಭಾವಗಳಾದ ಮೋಹ , ಶೋಕ ,ಕ್ಷುತ್ (ಹಸಿವು), ಪಿಪಾಸು(ಬಾಯಾರಿಕೆ) , ಜರ(ಅಜ್ಞಾನ) ಮತ್ತು ವ್ಯಾಧಿ, ಹಾಗೂ ಆರು ಬೆಳವಣಿಗೆಯ ಹಂತಗಳಾದ-ಅಸ್ತಿ(ಗರ್ಭ ಪ್ರವೇಶಿಸುವ ಹಂತ ), ಜಾಯತೆ (ಹುಟ್ಟುವ ಹಂತ), ವರ್ಧತೆ (ಬೆಳವಣಿಗೆಯ ಹಂತ), ವಿಪರಿಣಮತೆ( ದೇಹದ ಬದಲಾವಣೆಯ ಹಂತ) ಅಪಕ್ಷೀಯತೆ (ಮುದಿತನ) ಮತ್ತು ಕೊನೆಯದಾಗಿ ನಷ್ಯತೆ .
22-28) ಸಪ್ತತ್ವಕ್ -ಏಳು ತೊಗಟೆಗಳಾದ ತ್ವಕ್ (ಚರ್ಮದ ಹೊರ ಪದರು), ಚರ್ಮ(ಒಳಚರ್ಮ), ಮಾಂಸ , ರಕ್ತ , ಮೇದಸ್ಸು ,ಮಜ್ಜ ಮತ್ತು ಅಸ್ತಿ.
29-36) ಅಷ್ಟವಿಟಪಹಃ -ಎಂಟು ಬಗೆಯ ಜೀವಜಾತಗಳು (ಉದಾಹರಣೆಗೆ- ದೇವತೆಗಳು, ರಾಕ್ಷಸರು,ಮನುಷ್ಯರು, ಧಾನವರು.. ಇತ್ಯಾದಿ).
37-45 ) ನವಾಕ್ಷಹಃ -ಒಂಬತ್ತು ಪೊಟರೆಗಳಾದ ನವದ್ವಾರಗಳು (ಕಣ್ಣು, ಕಿವಿ , ಮೂಗು , ಬಾಯಿ ,ಮಲ-ಮೂತ್ರ ದ್ವಾರ)
45-55) ದಶಸ್ಚದಹಃ -ಹತ್ತು ಎಲೆಗಳು- ಐದು ಜ್ಞಾನೇಂದ್ರಿಯ ಮತ್ತು ಐದು ಕರ್ಮೇಂದ್ರಿಯಗಳು.
ಇಂತಹ ವಾಸ್ತುಶಿಲ್ಪದ ಈ ವಿಶಿಷ್ಟವಾದ ವಿಶ್ವವನ್ನು ವಿನ್ಯಾಸಗೊಳಿಸಿರುವ ಭಗವಂತ ವಿಶ್ವಕರ್ಮ.
ಈ ಪ್ರಪಂಚದಲ್ಲಿ ಒಂದು ವಸ್ತುವಿನಂತೆ ಇನ್ನೊಂದು ವಸ್ತುವಿಲ್ಲ. ಭಗವಂತನ ಅದ್ವಿತೀಯ ಅಖಂಡ ವಿನ್ಯಾಸಕ್ಕೆ ಉತ್ತಮ ಉದಾಹರಣೆ ಮನುಷ್ಯನ ಬೆರಳಚ್ಚು (Finger print) ಒಬ್ಬನ ಬೆರಳಚ್ಚು ಇನ್ನೊಬ್ಬನಿಗಿಂತ ಭಿನ್ನ ! ಇದು ಸಾಮಾನ್ಯ ವಿನ್ಯಾಸವಲ್ಲ. ಮೇಲಿನ ಅರ್ಥವಲ್ಲದೆ ಇನ್ನೂ ಅನೇಕ ಅರ್ಥಗಳನ್ನು ಈ ನಾಮದಲ್ಲಿ ನೋಡಬಹುದು. ವಿಶ್ವ ಅನ್ನುವ ಶಬ್ದಕ್ಕೆ 'ಎಲ್ಲಾ' ಎನ್ನುವ ಅರ್ಥವಿದೆ, ಅದ್ದರಿಂದ ವಿಶ್ವಕರ್ಮ ಎಂದರೆ ಸರ್ವ-ಕರ್ಮಗಳ ನಿಯಾಮಕ ಭಗವಂತ.
ಪುರಾಣದಲ್ಲಿ ಕಾಣುವ ದೇವ ಶಿಲ್ಪಿ-ವಿಶ್ವಕರ್ಮ. ದೇವಸ್ಥಾನ ಮತ್ತು ಮನೆಯ ವಾಸ್ತು ವಿನ್ಯಾಸವನ್ನು ದೇವಶಿಲ್ಪಿಯ ಒಳಗೆ ನಿಂತು ನಮಗೆ ಕರುಣಿಸಿದ ಭಗವಂತ ವಿಶ್ವಕರ್ಮ ಇತ್ಯಾದಿ.
What's new in the latest 2.0
ข้อมูล Vishwakarma (ವಿಶ್ವಕರ್ಮ) APK
Vishwakarma (ವಿಶ್ವಕರ್ಮ) รุ่นเก่า
Vishwakarma (ವಿಶ್ವಕರ್ಮ) 2.0
การดาวน์โหลดที่รวดเร็วและปลอดภัยเป็นพิเศษผ่านแอป APKPure
คลิกเพียงครั้งเดียวเพื่อติดตั้งไฟล์ XAPK/APK บน Android!